alex Certify BREAKING NEWS: ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬನೇ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಅದಕ್ಕೆ ಪೂರ್ವದಲ್ಲಿ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದೇನೆ ಎಂದು ಹೇಳಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಲಾಗುವುದು. ಯೋಜನೆ ಅನುಷ್ಠಾನ, ಉತ್ತಮ ಆಡಳಿತ ನೀಡುವತ್ತ ಗಮನಹರಿಸುತ್ತೇನೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಇಂದು ನಾನು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...