alex Certify ಪರಿಹಾರಕ್ಕಾಗಿ ಕಾಂಗ್ರೆಸ್ ನವರಂತೆ ಹೈಕಮಾಂಡ್ ಮುಂದೆ ಅರ್ಜಿ ಹಿಡಿದು ನಿಲ್ಲುವ ಕಾಲ ಈಗಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಹಾರಕ್ಕಾಗಿ ಕಾಂಗ್ರೆಸ್ ನವರಂತೆ ಹೈಕಮಾಂಡ್ ಮುಂದೆ ಅರ್ಜಿ ಹಿಡಿದು ನಿಲ್ಲುವ ಕಾಲ ಈಗಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ರಚಿಸುತೇವೆ ಎನ್ನುತ್ತಾರೆ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಬರ ಪರಿಸ್ಥಿತಿಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ. ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ ಎಂದರು.

ರಾಜಕೀಯ ಪ್ರೇರಿತ ದೃಷ್ಟಿಯಿಂದ ಸಿದ್ದರಾಮಯ್ಯ ಬರಪರಿಹಾರಕ್ಕಾಗಿ ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. 15 ನೇ ಹಣಕಾಸು ಆಯೋಗದಲ್ಲಿ ಅನುದಾನ ಕಡಿಮೆ ಆಗಲು ಸಿದ್ದರಾಮಯ್ಯನವರು ಕಾರಣ. ಕೇಂದ್ರಕ್ಕೆ ಅವರು ರಾಜ್ಯದ ನೈಜ್ಯಸ್ಥಿತಿಯನ್ನ ಆಗಿನ ಸರ್ಕಾರ ಹೇಳಿಕೊಳ್ಳಲಿಲ್ಲಾ ಅದಕ್ಕೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಯುಪಿಎ ಸರ್ಕಾರ ಇದ್ದಾಗ 8-10 ತಿಂಗಳ ನಂತರ ಪರಿಹಾರ ನೀಡಿದ ಉದಾಹರಣೆಯಿದೆ. ಇವರಿಗೆ ರೈತರ ಬಗ್ಗೆ ಕಳಕಳಿ ಇಲ್ಲಾ. ರೈತ ವಿರೋಧಿ ಸರ್ಕಾರ ಇದಾಗಿದೆ ಎಂದರು.
ರಾಜ್ಯದ ಬಿಜೆಪಿಯ 25 ಸಂಸದರು ಪುಕ್ಕಲರು ಎನ್ನುವ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಒಂದು ವ್ಯವಸ್ಥೆಯೊಳಗೆ ಕೆಲಸ ಮಾಡುವಾಗ ವ್ಯಕ್ತಿಗತ ಪ್ರಶ್ನೆ ಎನ್ನುವುದು ಬರುವುದಿಲ್ಲ. ನರೇಂದ್ರ ಮೋದಿಯವರ ಕಾಲದಲ್ಲಿ ಯಾವುದೇ ಲಾಭಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುತ್ತಾರೆ. ಹೀಗಾಗಿ ರಾಜ್ಯಕ್ಕೆ ಕೇಂದ್ರಕ್ಕೆ ಏನು ಸಿಗಬೇಕು ಅದೆಲ್ಲವೂ ಸಿಗುತ್ತದೆ ಎಂದರು.

ಕಾಂಗ್ರೆಸ್‌ನವರು ಹೈಕಮಾಂಡ್‌ ಕಡೆ ಹೋಗಿ ಅರ್ಜಿ ಕೊಡಬೇಕು. ಇದು ಕಾಂಗ್ರೆಸ್‌ನವರ ಸ್ಟೈಲ್‌. ಇವರ ರೀತಿ ಬಿಜೆಪಿಯವರಾದ ನಾವು ಮಾಡಲು ಬರುವುದಿಲ್ಲ. ಕಾಂಗ್ರೆಸ್‌ನವರಂತೆ ನಾವು ಮೋದಿಯವರ ಮುಂದೆ ಕೈಕಟ್ಟಿ ನಿಲ್ಲುವ ಪ್ರಶ್ನೆಯೇ ಇಲ್ಲ. ನಾವು ಮೋದಿಯವರ ಜೊತೆಗೆ ನಿಲ್ಲುತ್ತೇವೆ. ಅವರನ್ನು ಬೆಂಬಲಿಸುತ್ತೇವೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...