ನವದೆಹಲಿ: ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವತ್ತು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಸಂಪುಟ ರಚನೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವರಿಷ್ಠರ ಒಪ್ಪಿಗೆಯೊಂದಿಗೆ ಸಿಎಂ ಬೆಂಗಳೂರಿಗೆ ಬಂದು ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪದಗ್ರಹಣ ಮಾಡಲಿದ್ದಾರೆ.
ಇನ್ನು ಎರಡು, ಮೂರು ಹೆಸರುಗಳನ್ನು ಫೈನಲ್ ಮಾಡಿ ಹೈಕಮಾಂಡ್ ಫೋನ್ ಮೂಲಕ ಮಾಹಿತಿ ನೀಡಲಿದ್ದು ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.