
ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಆಯ್ಕೆಗೆ ನಾಳೆ ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿಯಿಂದ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಬಸವರಾಜ ಹೊರಟ್ಟಿ ಅವರೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಿಂದೆ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರು ರಾಜೀನಾಮೆ ನೀಡಿದ ನಂತರ ರಘುನಾಥರಾವ್ ಮಲ್ಕಾಪುರೆ ಅವರನ್ನು ಸಭಾಪತಿಯಾಗಿ ನೇಮಕ ಮಾಡಲಾಗಿತ್ತು.
ವಿಧಾನ ಪರಿಷತ್ ನ 75 ಸದಸ್ಯ ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 26, ಜೆಡಿಎಸ್ 8 ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಸಭಾಪತಿಯಾಗಲು 38 ಮತಗಳ ಪಡೆಯಬೇಕಿದ್ದು, ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವುದರಿಂದ ಬಸವರಾಜ ಹೊರಟ್ಟಿ ಆಯ್ಕೆ ನಿಶ್ಚಿತವಾಗಿದೆ.