ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನ ಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡಲಾಗುವುದು ಎಂದು ಹೇಳಲಾಗಿದೆ.
ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದ್ದು, ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.