
ಬೆಂಗಳೂರು: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಬಸವರಾಜ್ ಹೊರಟ್ಟಿ ತಮ್ಮ ನಿರ್ಧಾರದಿಂದ ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸ್ವತಃ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.
ಸದನದಲ್ಲಿ ಸದಸ್ಯರ ಕೆಲ ವರ್ತನೆಗಳಿಂದ ಬೇಸರಗೊಂಡಿದ್ದ ಸಭಾಪತಿ ಬಸವರಾಜ್ ಹೊರಟ್ಟಿ, ತಾವು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೇ ಹೊರಟ್ಟಿ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಭಾಪತಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತಿರುವುದಾಗಿಯೂ ಹೊರಟ್ಟಿ ತಿಳಿಸಿದ್ದರು. ಆದರೆ ಈಗ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ತಮ್ಮ ರಾಜೀನಾಮೆ ಸುದ್ದಿ ಹರಿದಾಡಿ ಬಳಿಕ ರಾಜ್ಯಪಾಲರು, ಸಚಿವರು, ಸಾಹಿತಿಗಳು ಮಾತನಾಡಿದ್ದಾರೆ. 27ರಂದು ಕುಳಿತು ಮಾತನಾಡಿ ತೀರ್ಮಾನ ಮಾಡೋಣ ಎಂದಿದ್ದಾರೆ. ಹೀಗಾಗಿ ರಾಜೀನಾಮೆ ವಿಚಾರ ಅಲ್ಲಿಗೆ ಕೈಬಿಟ್ಟಿದ್ದೇನೆ ಎಂದಿದ್ದಾರೆ.
ಅನ್ ಸೈನ್ಡ್ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಸಚಿವರು ಕೂತು ತೀರ್ಮಾನ ಮಾಡೋಣ ಎಂದಿದ್ದಾರೆ ಹಾಗಾಗಿ ರಾಜೀನಾಮೆ ಅಲ್ಲಿಗೆ ಕೈಬಿಟ್ಟಿದ್ದೇನೆ. ಬೆಂಗಳೂರಿನಲ್ಲಿ ಸಭೆ ಮಾಡಲು ತೀರ್ಮಾನಿಸಲಾಗಿದೆ. ಎಲ್ಲರೂ ರಾಜೀನಾಮೆ ಕೊಡಬೇಡಿ ಎನ್ನುತ್ತಿದ್ದಾರೆ. ನಮ್ಮ ಶಾಸನ ಸಭೆ ಸದಸ್ಯರು ರಾಜೀನಾಮೆ ವಿರೋಧಿಸಿದ್ದಾರೆ. ಪುಟ್ಟಣ್ಣ ಕೂಡ ಕರೆ ಮಾಡಿ ರಾಜೀನಾಮೆ ಬೇಡ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದರು.