ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ.
ಧಾರವಾಡ ಗ್ರಾಮೀಣ ಶ್ರೀಧರ್ ಅವರನ್ನು ಡಿಜಿ-ಐಜಿಪಿ ಪ್ರವೀಣ್ ಸೂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜನವರಿ 25 ರಂದು ಸಭಾಪತಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಸರ್ವೋದಯ ಶಿಕ್ಷಣ ಸಂಸ್ಥೆ ವಾಲ್ಮೀಕಿ ಮಹಾಸಭಾದ ನಡುವೆ ನಡೆದ ವಿವಾದಕ್ಕೆ ಮುಗದ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಮೋಹನ್ ಗುಡಿಸಲಮನೆ ಎಂಬುವರು ದೂರು ನೀಡಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆ ಶಿಕ್ಷಕರ ಜೊತೆಗೆ ಬಸವರಾಜ ಹೊರಟ್ಟಿ ಅವರನ್ನು ಐದನೇ ಆರೋಪಿಯನ್ನಾಗಿ ಮಾಡಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.