alex Certify BIG BREAKING: ಜೆಡಿಎಸ್ ಮತ್ತೊಂದು ವಿಕೆಟ್ ಪತನ; ಹೊರಟ್ಟಿ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜೆಡಿಎಸ್ ಮತ್ತೊಂದು ವಿಕೆಟ್ ಪತನ; ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಲಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಮಾತುಕತೆ ಆಗಿದ್ದು, ಎಲ್ಲರೂ ಬಿಜೆಪಿ ಸೇರ್ಪಡೆಗೆ ಸಹಮತ ನೀಡಿದ್ದಾರೆ. ನಾನು ಬಿಜೆಪಿ ಸೇರಲು ಕುಮಾರಸ್ವಾಮಿಯವರೂ ಒಪ್ಪಿದ್ದಾರೆ. ಅಧಿಕೃತ ಸೇರ್ಪಡೆ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೊರಟ್ಟಿ ಹೇಳಿದ್ದಾರೆ.

ಹೊರಟ್ಟಿ ಅವರು ಬಿಜೆಪಿ ಸೇರುವ ಬಗ್ಗೆ ಇತ್ತೀಚೆಗೆ ವದಂತಿ ಹರಡಿತ್ತು. ಆದರೆ, ಖಚಿತವಾಗಿರಲಿಲ್ಲ. ಅವರು ಪಕ್ಷ ಸೇರಲು ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಇದೀಗೆ ಹೊರಟ್ಟಿಯವರೇ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...