ವಿಧಾನ ಪರಿಷತ್ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಜಯಗಳಿಸುವ ಮೂಲಕ ಬಸವರಾಜ ಹೊರಟ್ಟಿ ಐತಿಹಾಸಿಕ ದಾಖಲೆ ಬರೆದಿದ್ದು, ಅವರ ಸಾಧನೆ ಲಂಡನ್ ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರ್ಪಡೆಯಾಗಿದೆ.
ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ, ಶಿಕ್ಷಣ ಸಚಿವರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 5 ದಶಕಗಳಿಂದ ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಬಸವರಾಜ ಹೊರಟ್ಡಿ ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಈ ಕುರಿತು ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ದೃಢೀಕರಣ ಪತ್ರ ನೀಡಿ ಗೌರವಿಸಿದೆ. ಇದು ಶಿಕ್ಷಕ ಸಮುದಾಯಕ್ಕೆ ಸಂದ ಗೌರವವಾಗಿದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.