ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಹೊಂದಾಣಿಕೆ ಆಗಲಿದೆ. ವಿಧಾನಪರಿಷತ್ ನಲ್ಲಿ ಬಿಜೆಪಿ 31, ಕಾಂಗ್ರೆಸ್ 28, ಜೆಡಿಎಸ್ 13, ಪಕ್ಷೇತರ 1 ಹಾಗೂ ಒಂದು ಸ್ಥಾನ ಖಾಲಿ ಇವೆ. ಸಭಾಪತಿಯಾಗಿ ಜೆಡಿಎಸ್ ನ ಬಸವರಾಜ ಹೊರಟ್ಟಿ, ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ಅವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.