
ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಭಾರ ಸಹಜವಾಗಿಯೇ ಹೆಚ್ಚಾಗಿದೆ. ಹೀಗಾಗಿ ಯೋಜನೆಗಳಲ್ಲಿ ಸುಧಾರಣೆ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 58,000 ಕೋಟಿ ರೂಪಾಯಿ ವೆಚ್ಚದ 5 ಗ್ಯಾರಂಟಿ ಯೋಜನೆಗಳನ್ನು ಸಡನ್ ಆಗಿ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಡವರ ಬಗ್ಗೆ ಅಪಾರ ಕಾಳಜಿ ಇರುವುದರಿಂದ ಜನಪರ ಯೋಜನೆ ಜಾರಿಗೊಳಿಸಿದ್ದಾರೆ. ಜನರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದ್ದು, ಆಗಿರುವ ಆರ್ಥಿಕ ಹೊರೆ ನಿಭಾಯಿಸಬೇಕಿದೆ. ಹೊರೆ ತಗ್ಗಿಸುವ ನಿಟ್ಟಿನಲ್ಲಿ ಏನು ಸುಧಾರಣೆ ಮಾಡಬೇಕು ಎಂಬುದರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜನರ ಮೇಲಿನ ತೆರಿಗೆ ಹೆಚ್ಚಳ ಮಾಡುವುದು ಕಷ್ಟ. ಇದರ ಹೊರತಾಗಿ ಆದಾಯಕ್ಕಾಗಿ ಚಿಂತನೆ ನಡೆದಿದೆ. ನಗರ ಯೋಜನೆ ವ್ಯಾಪ್ತಿಯ ಲೇಔಟ್ ಗಳ ಸಕ್ರಮ ಸೇರಿ ಹಲವು ರೀತಿಯಲ್ಲಿ ಆದಾಯ ಹೆಚ್ಚಳಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.