
ಕೊಪ್ಪಳ: ಯಲಬುರ್ಗಾ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಅವರಿಗೆ ಇತ್ತೀಚೆಗೆ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ.
ಜುಲೈನಲ್ಲಿ ನನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರಣಾಂತರದಿಂದ ಸದ್ಯಕ್ಕೆ ನನ್ನನ್ನು ಆರ್ಥಿಕ ಸಲಹೆಗಾರನಾಗಿ ನೇಮಿಸಲಾಗಿದೆ. ನಿನ್ನ ಫೈನಾನ್ಸ್ ನೀತಿ ನೋಡಿಕೊಂಡು ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ರಾಯರೆಡ್ಡಿ ತಿಳಿಸಿದ್ದಾರೆ.