alex Certify ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದ್ದಾರೆ.

ಸಚಿವರಾಗುವ ಆಸೆಯಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ರಾಯರೆಡ್ಡಿ ಅವರೇ ಸೋಲಿಸುತ್ತಾರೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನಾನು ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಸೋಲಿಸುವಷ್ಟು ಕೆಳಮಟ್ಟಕ್ಕೆ ಇಳಿಯುವುದಿಲ್ಲ. ಅಭ್ಯರ್ಥಿ ಯಾರೇ ಆಗಲಿ, ಕ್ಷೇತ್ರ ಯಾವುದೇ ಆಗಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...