alex Certify ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಸವಾಲು ಹಾಕಿದ್ದಾರೆ.

ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಬಿಜೆಪಿ ಅಭ್ಯರ್ಥಿ ಬದಲಾಯಿಸುವಂತೆ ಮಾಜಿ ಸಚಿವರಾದ ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ಎಸ್.ಎ. ರವೀಂದ್ರನಾಥ್ ಬಣ ಒತ್ತಾಯಿಸಿದೆ. ಈ ನಡುವೆ ಬಸವರಾಜ್ ಶಿವಗಂಗಾ ಅವರು ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸವಾಲು ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...