ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಸಂಪುಟ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ದಿನವೇ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಯೋಜನೆ. ಇದಕ್ಕಾಗಿ 1,000 ಕೋಟಿ ರೂ. ಮೀಸಲು.
ಸಂಧ್ಯಾ ಸುರಕ್ಷಾ ಯೋಜನೆಯಡಿಯ ನೆರವು 1,000 ದಿಂದ 1,200 ರೂ.ಗೆ ಏರಿಕೆ. ಇದಕ್ಕಾಗಿ 863.52 ಕೋಟಿ ರೂ. ಹೆಚ್ಚುವರಿ ವೆಚ್ಚ. 35.98 ಲಕ್ಷ ಫಲಾನುಭವಿಗಳಿಗೆ ಅನುಕೂಲ.
ವಿಧವಾ ವೇತನ 600 ರಿಂದ 800 ರೂ. ಕ್ಕೆ ಹೆಚ್ಚಳ. ಇದಕ್ಕಾಗಿ 414 ಕೋಟಿ ರೂ. ಹೆಚ್ಚುವರಿ ವೆಚ್ಚ. 17.25 ಲಕ್ಷ ಫಲಾನುಭವಿಗಳಿಗೆ ಅನುಕೂಲ.
40%-70% ಅಂಗವೈಕಲ್ಯ ಇರುವವರಿಗೆ ನೀಡುವ ಆರ್ಥಿಕ ನೆರವಿನ ಮೊತ್ತ 600 ರಿಂದ 800 ರೂ.ಗೆ ಹೆಚ್ಚಳ. ಇದಕ್ಕಾಗಿ 90 ಕೋಟಿ ರೂ. ಹೆಚ್ಚುವರಿ ವೆಚ್ಚ. 3.66 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಸಚಿವ ಸಂಪುಟದ ನಿರ್ಣಯಗಳನ್ನು ತಿಳಿಸಿದರು:
ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಶಿಸ್ತು ತರಲು ಮಾರ್ಚ್ 31 ರೊಳಗೆ ಎಲ್ಲಾ ಇಲಾಖೆಗಳಲ್ಲಿ ಅನವಶ್ಯಕ ಖರ್ಚು ಕಡಿಮೆ ಮಾಡಲು ಸೂಚನೆ ನೀಡಲಾಗಿದೆ. ಶೇ.5 ರಷ್ಟು ವೆಚ್ಚ ಕಡಿಮೆ ಮಾಡಲು ಸೂಚಿಸಲಾಗಿದೆ. ಕೋವಿಡ್ ನಿಯಂತ್ರಣ ಹಾಗೂ ಲಸಿಕಾ ಅಭಿಯಾನಕ್ಕೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದ್ದಾರೆ.