ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
ಘಟನೆ ನಡೆದು 24 ಗಂಟೆಯಾದರೂ ಬಾಲಕನ ಸುಳಿವು ಪತ್ತೆಯಾಗಿಲ್ಲ. ಆತನ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಲಾಗಿದೆ. ಪೋಷಕರಿಗೆ ಅಪಹರಣಕಾರರು ಭಾರೀ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಉಜಿರೆಯಲ್ಲಿ ಬಾಲಕ ಅನುಭವ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪ್ರಕರಣ ಭೇದಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಪಹರಣಕಾರರು ಪೊಲೀಸರಿಗೆ ತಿಳಿಸದಂತೆ ಧಮಕಿ ಹಾಕುತ್ತಾರೆ. 24 ಗಂಟೆಯಲ್ಲಿ ಹಣ ತಂದುಕೊಡಬೇಕೆಂದು ಹೇಳುತ್ತಾರೆ. ಇದನ್ನೆಲ್ಲ ನೋಡಿದರೆ ದೊಡ್ಡ ಖದೀಮರೇ ಇದ್ದಾರೆ ಎನ್ನುವುದು ತಿಳಿಯುತ್ತದೆ. ವಿಶೇಷ ತಂಡ ರಚಿಸಿ ಬಾಲಕನ ಪತ್ತೆಗೆ ಶೋಧ ನಡೆಸಲಾಗಿದೆ. ಶೀಘ್ರದಲ್ಲಿ ಪ್ರಕರಣ ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.