ನವದೆಹಲಿ: ಮುಸ್ಲಿಮರಿಗೆ 4 ಪ್ರತಿಶತ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಸರ್ಕಾರವು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ 2% ಕೋಟಾವನ್ನು ಹೆಚ್ಚಿಸುವ ಮತ್ತು ಮುಸ್ಲಿಮರಿಗೆ 4% OBC ಕೋಟಾವನ್ನು ರದ್ದುಪಡಿಸುವ ನಿರ್ಧಾರವು ದೋಷಪೂರಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಲ್ಲಿಯವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಭರವಸೆ ನೀಡಿದ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 18 ಕ್ಕೆ ಮುಂದೂಡಿದೆ.
ಏಪ್ರಿಲ್ 18 ರ ಮುಂದಿನ ವಿಚಾರಣೆಯ ದಿನಾಂಕದವರೆಗೆ ಅಧಿಸೂಚನೆಯ ಆಧಾರದ ಮೇಲೆ ಕರ್ನಾಟಕ ಸರ್ಕಾರವು ಯಾವುದೇ ಪ್ರವೇಶ ಮತ್ತು ನೇಮಕಾತಿಯನ್ನು ಮಾಡುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು.