
ಬೆಂಗಳೂರು: ಬಾಸ್ಕೇಟ್ ಬಾಲ್ ಕೋಚ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
26 ವರ್ಷದ ಸೋನಿಯಾ ಆತ್ಮಹತ್ಯೆ ಮಾಡಿಕೊಂಡವರು. ಸೋನಿಯಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ 7-8 ವರ್ಷಗಳಿಂದ ಬಾಸ್ಕೇಟ್ ಬಾಲ್ ನಲ್ಲಿ ಗುರುತಿಸಿಕೊಂಡಿದ್ದ ಸೋನಿಯಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿಯೂ ಭಾಗವಹಿಸಿದ್ದರು.
ಮುಂದಿನ ತಿಂಗಳು ದುಬೈನಲ್ಲಿ ನಡೆಯಬೇಕಿದ್ದ ಟೂರ್ನಿಯಲ್ಲಿ ಸೋನಿಯಾ ಆಡಬೇಕಿತ್ತು. ಆದರೆ ಅಷ್ಟರಲ್ಲಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದವರು ಹೇಳುವ ಪ್ರಕಾರ ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಜಾರಿ ಬಿದ್ದು, ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಆಸ್ಪತ್ರೆಗೆ ಸೇರಿಸುವ ಮೊದಲೇ ಸಾವನ್ನಪ್ಪಿದ್ದಾರೆ ಎಂದಿದ್ದಾರೆ. ಆದರೆ ಸೋನಿಯಾ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.