
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.
14 ವರ್ಷದ ಅಕ್ಷಯಾ ಮೃತ ಬಾಲಕಿ. ಹೆಬ್ಬಾಳ ಪೊಲೀಸ್ ಠಾಣೆಯ ಮುಂಭಾಗ ಅಂಡರ್ ಪಾಸ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದು, ಸಾರ್ವಜನಿಕರು ಡಿವೈಡರ್ ದಾಟಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಸದ ಲಾರಿ ಜನರ ಮೇಲೆ ಹರಿದಿದೆ. ಸ್ಥಳದಲ್ಲೇ ಬಾಲಕಿ ಅಕ್ಷಯಾ ಮೃತಪಟ್ಟಿದ್ದಾಳೆ. 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್.ಟಿ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.