ಬೆಂಗಳೂರು: ಬಿಬಿಎಂಪಿಯ ಪಶ್ಚಿಮ ವಲಯ ಕಲ್ಯಾಣ ಇಲಾಖೆಯಲ್ಲಿ ಬಹುಕೋಟಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಇದೀಗ ರಾಜ್ಯ ಸರ್ಕಾರ ಪಶ್ಚಿಮ ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬಿಬಿಎಂಪಿ ಕಲ್ಯಾಣ ಇಲಾಖೆಯಲ್ಲಿ 102 ಕೋಟಿ ಹಗರಣ ನಡೆದಿದ್ದು, ಅಸ್ತಿತ್ವದಲ್ಲಿಯೇ ಇಲ್ಲದ ಸೊಸೈಟಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಲೋಕಾಯುಕ್ತದಲ್ಲಿಯೂ ದೂರು ದಾಖಲಾಗಿದೆ.
2020ರಿಂದ 2021ರ ಅವಧಿಯಲ್ಲಿ ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಬಹುಕೋಟಿ ಹಗರಣ ನಡೆದಿದೆ. ಈ ಸಂಬಂಧ ಹಣಕಾಸು ವಿಭಾಗದ 9 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಸರ್ಕಾರ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಿದೆ.