ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಮೇಲ್ವಿಚಾರಣೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಗಾಗಿ https://apps.bbmpgov.in/ganesh2024/ ವೆಬ್‌ಸೈಟ್ ವೀಕ್ಷಿಸಬಹುದು.