ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಟ್ವಿಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ. ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಪೋಲಿಸರ ಗಮನಕ್ಕೆ ತರಬೇಕೆನ್ನುವುದನ್ನು ಒಪ್ಪಬಹುದು, ಆದರೆ ಪೂಜೆ ಸಲ್ಲಿಸಲು BBMP ಅನುಮತಿ ಪಡೆದುಕೊಳ್ಳಬೇಕೆನ್ನುವ ನಿಯಮ ‘ತುಘಲಕ್’ ಆಡಳಿತ ನೆನಪಿಗೆ ತರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.