ಬೆಂಗಳೂರು: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ತುಷಾರ್ ಗಿರಿನಾಥ್ ಗೆ ಸಂಕಷ್ಟ ಎದುರಾಗಿದೆ.
ಮತದಾರರ ಪಟ್ಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರೇ ಅವಕಾಶ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾಜಿ ಎಂಎಲ್ ಸಿ ರಮೇಶ್ ಬಾಬು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಿಎಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೋರಿದೆ. ಆಗಸ್ಟ್ ತಿಂಗಳಲ್ಲಿಯೇ ಸರ್ಕಾರ ವರದಿ ಕೇಳಿದೆ. ಪ್ರಕರಣ ತದವಾಗಿ ಬೆಳಕಿಗೆ ಬಂದಿದೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಂಕಷ್ಟ ಎದುರಾಗಿದೆ.