ಬೆಂಗಳೂರು: ಲಾಕ್ಡೌನ್ ಮುಗಿಯುವಷ್ಟರಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಪ್ಲಾನ್ ಮಾಡಿಕೊಂಡಿದೆ. ಕೊರೊನಾ ಸೋಂಕು ತಡೆಯಲು ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಬಿಎಂಪಿ ಪ್ರಯೋಗ ಯಶಸ್ವಿಯಾದರೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎನ್ನಲಾಗಿದೆ.
ಮನೆಮನೆಗೂ ಹೋಗಿ ಕೋವಿಡ್ ಟೆಸ್ಟ್ ಮಾಡಲಾಗುವುದು. ಸೋಂಕಿತರನ್ನು ಕೇರ್ ಸೆಂಟರ್ ಮತ್ತು ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗುವುದು. ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಗಳ ಮೇಲೆ ನಿಗಾ ವಹಿಸಲಾಗುವುದು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆಗೆ ಕ್ರಮ, ಆಕ್ಸಿಜನ್ ವಿತ್ ಕೇರ್ ಸೆಂಟರ್ ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜಾಗಿದೆ. ಈಗಾಗಲೇ ಹಜ್ ಭವನ, ಹೆಬ್ಬಾಳದ ಕೇರ್ ಸೆಂಟರ್ ನಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದ್ದು, ಈ ರೀತಿ ಪರಿಣಾಮಕಾರಿ ಕ್ರಮಗಳ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ.