ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಕಸದ ಕ್ವಾರಿಯೊಂದು ಹೊತ್ತಿ ಉರಿಯುತಿದ್ದರೂ ಬಿಬಿಎಂಪಿ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಲ್ಲಹಳ್ಳಿಯ ಎಲೆಕ್ಟ್ರಾನಿಕ್ ಸಿಟಿ ಬಳಿ ಕಸದ ಕ್ವಾರಿಗೆ ಬೆಂಕಿ ಬಿದ್ದಿದ್ದು, ಮೂರು ದಿನಗಳಿಂದ ಧಗ ಧಗನೆ ಹೊತ್ತಿ ಉರಿಯುತ್ತಲೇ ಇದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಪ್ರದೇಶಗಳಿಗೂ ವ್ಯಾಪಿಸುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಇತ್ತ ಮುಖ ಮಾಡಿಲ್ಲ. ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿಲ್ಲ.
ಹೊತ್ತಿ ಉರಿಯುತ್ತಿರುವ ಕಸದ ಕ್ವಾರಿಯತ್ತ ಇಂದು ಸುತ್ತಮುತ್ತಲ ಗ್ರಾಮಸ್ಥರು ಜಮಾವಣೆಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.