
ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಚ್ 29ರಂದು ಸ್ಥಳೀಯರು ಕಸದ ಲಾರಿಗೆ ಬೆಂಕಿ ಹಚ್ಚಿದ್ದರು.
ಕಸದ ಲಾರಿ ಬೈಕ್ ಗೆ ಗುದ್ದಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದ. ಆಕ್ರೋಶಗೊಂಡ ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.