ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಮಾರ್ಗಸೂಚಿಯಲ್ಲಿ ಏನಿದೆ
1) ಪ್ರಮುಖವಾಗಿ ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
2) ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್ ಆಗಲಿದೆ. ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗುತ್ತದೆ.ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿದೆ.
3) ಲೌಡ್ ಸ್ಪೀಕರ್ ಬಳಸುವ ಹಾಗಿಲ್ಲ, ಪಟಾಕಿ ಸಿಡಿಸುವ ಹಾಗಿಲ್ಲ.
4) ಬಾರ್, ಪಬ್ ಗಳನ್ನು ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಮಾಡಬೇಕು.
ಮುಂದುವರೆದಂತೆ ಮಹಿಳೆಯರು ಮಕ್ಕಳ ರಕ್ಷಣೆಗೆ ಮಹಿಳಾ ಪೊಲೀಸರನ್ನು ನಿಯೋಜಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರ ಇರಲಿದೆ. ರಾತ್ರಿ ಒಂದು ಗಂಟೆಯವರೆಗೆ ಮೆಟ್ರೋ ಸಂಚಾರ ಇರುತ್ತದೆ.
5) ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200 ಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಕೆ