ಬೆಂಗಳೂರು: ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ.
ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. ಬಿಬಿಎಂಪಿ ವತಿಯಿಂದ ಅಂಗಡಿಗಳಿಗೆ ನೋಟಿಸ್ ಕೊಟ್ಟು ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. ಕನ್ನಡ ನಾಮಫಲಕ ಅಳವಡಿಕೆಗೆ ಕಾಲಾವಕಾಶ ನೀಡಿದರೂ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸಿದೆ.