ಬೆಂಗಳೂರು: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ ಪ್ರತ್ಯೇಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯಡಿ ಬರುವ 10 ಮಹಾನಗರ ಪಾಲಿಕೆ, ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿಕಾರಿಗಳು, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರೊಂದಿಗೆ ಸಭೆ ನಡೆಸಿದ ಸಚಿವರು ಈ ಕುರಿತು ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಕಲಬುರಗಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ವಿಜಯಪುರ, ತುಮಕೂರು ಪಾಲಿಕೆಗಳಲ್ಲಿ ಬಿಬಿಎಂಪಿ ಮಾದರಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಲಾಗಿದ್ದು, ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.