ಬೆಂಗಳೂರು: ಆಸ್ತಿ ತೆರಿಗೆ ಉಳಿಸಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
ಶೇ.100ರಷ್ಟು ತೆರಿಗೆ ಪಾವತಿಸುವಂತೆ ಬಿಬಿಎಂಪಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತಿಳಿಸಿತ್ತು. ಅದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಸ್ತಿ ತೆರಿಗೆ ಪಾವತಿಸದೇ ಪ್ರತಿಭಟಿಸಿದೆ.
ಈಗಾಗಲೇ ಶೇ.25ರಷ್ಟು ತೆರಿಗೆ ಪಾವತಿಸಲಾಗುತ್ತಿದೆ. ಬೇರೆ ರಾಜ್ಯಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿ ಇದೆ. ಈಗ ಬಿಬಿಎಂಪಿ ಶೇ.100ರಷು ತೆರಿಗೆ ಪಾವತಿಸಲು ಸೂಚಿಸಿರುವುದು ಖಂಡನೀಯ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಬಿಬಿಎಂಪಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೂರರಷ್ಟು ತೆರಿಗೆ ಪಾವತಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.