ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಸಾವನ್ನಪ್ಪಿದ್ದಾರೆ.
ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಇ ಶಿವಕುಮಾರ್ ಚಿಕಿತ್ಸೆ ಪಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶೇಕಡ 25 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ ಒಂದು ವಾರ ಚಿಕಿತ್ಸೆ ಪಡೆದುಕೊಂಡಿದ್ದರು. ಶ್ವಾಸಕೋಶ ನಿಷ್ಕ್ರಿಯವಾದ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.