alex Certify ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ.

ಅಸ್ತಿ ತೆರಿಗೆ ಪೂರ್ಣ ಪಾವತಿಸುವವರಿಗೆ ರಿಯಾಯಿತಿ ಅವಧಿಯನ್ನು ಜೂನ್ 30ರವರೆಗೆ ಸರ್ಕಾರ ವಿಸ್ತರಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ತಿಳಿಸಲಾಗಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಿಯಾಯಿತಿಯನ್ನು ಏಪ್ರಿಲ್ 30ಕ್ಕೆ ಅಂತ್ಯಗೊಳಿಸಲಾಗಿತ್ತು. ತೆರಿಗೆದಾರರಿಗೆ ಅನುಕೂಲವಾಗುವಂತೆ ಮತ್ತು ಬಿಬಿಎಂಪಿ ಆರ್ಥಿಕ ಹಿತದೃಷ್ಟಿಯಿಂದ ರಿಯಾಯಿತಿ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...