ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ.
ಡಿಸೆಂಬರ್ 2ರಿಂದ ವಾಣಿಜ್ಯ ಕಟ್ಟಡಗಳಿಗೆ ಬೀಗ ಹಾಕುವ ಪ್ರಕ್ರಿಯೆಗೆ ಕೈಗೊಳ್ಳಲು ಅಧಿಕಾರಿಗಳು ಸಜ್ಜಾಗಿದ್ದಾರೆ. ನವೆಂಬರ್ 30ರ ಶನಿವಾರ ಒಟಿಎಸ್ ಪಾವತಿಯಡಿ ತೆರಿಗೆ ಪಾವತಿ ಅವಧಿ ಮುಕ್ತಾಯವಾಗಿದೆ. ಮತ್ತೆ ಕಾಲಾವಕಾಶ ವಿಸ್ತರಿಸದಿರಲು ನಿರ್ಧರಿಸಿರುವ ಬಿಬಿಎಂಪಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ.
ಕಂದಾಯ ವಿಭಾಗದಿಂದ ಈಗಾಗಲೇ ಇಂತಹ ಆಸ್ತಿ ಮಾಲೀಕರ ಪಟ್ಟಿ ಸಿದ್ದಪಡಿಸಲಾಗಿದ್ದು, ಆಯಾ ವಲಯಗಳ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವವರ ಕಟ್ಟಡಗಳನ್ನು ಸೀಜ್ ಮಾಡಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.