
ಬೆಂಗಳೂರು: ಬಿಬಿಎಂಪಿ 444 ಹುದ್ದೆಗಳ ನೇರ ನೇಮಕಾತಿಗೆ ಮುಂದಾಗಿದ್ದು, ನೇರ ಸಂದರ್ಶನ ನಿಗದಿಪಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ, ರಾಷ್ಟ್ರೀಯ ಮಾನಸಿಕ ಆರೋಗ್ಯ, ತಂಬಾಕು ನಿಯಂತ್ರಣ, ಕುಷ್ಟರೋಗ ನಿರ್ಮೂಲನೆ, ಅಂಧತ್ವ ನಿರ್ಮೂಲನಾ ಕಾರ್ಯಕ್ರಮಗಳಡಿ ಖಾಲಿ ಇರುವ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಪಾಲಿಕೆ ನಿಗದಿಪಡಿಸಿದ ಸ್ಥಳಗಳಲ್ಲಿ ಫೆಬ್ರವರಿ 13 ರಿಂದ 15 ರವರೆಗೆ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುವುದು. ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ಒಂದು ವರ್ಷ ಅವಧಿ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಮಕ್ಕಳ ತಜ್ಞರು, ನೇತ್ರ ತಜ್ಞರು, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್ಸ್, ಸ್ಟಾಪ್ ನರ್ಸ್ ಇತರೆ ಅರೆ ವೈದ್ಯ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.