ಬೆಂಗಳೂರು: ಬಿಬಿಎಂಪಿ 243 ವಾರ್ಡ್ ಗಳಿಗೆ ಮೀಸಲಾತಿ ಕರಡು ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸುಮಾರು 2000ಕ್ಕೂ ಅಧಿಕ ಆಕ್ಷೇಪಣೆಗಳನ್ನು ಸಲ್ಲಿಕೆಯಾಗಿದ್ದು, ಇವುಗಳೆಲ್ಲವನ್ನು ಪರಿಶೀಲಿಸಿದ ಸರ್ಕಾರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಯನ್ನೇ ಅಂತಿಮ ಪಟ್ಟಿ ಮಾಡಿ ಆದೇಶಿಸಲಾಗಿದೆ. ಕರಡು ಪಟ್ಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿಲ್ಲವೆಂದು ಕಾಂಗ್ರೆಸ್ ನಾಯಕರು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ನಗರಾಭಿವೃದ್ಧಿ ಇಲಾಖೆಗೆ ಆಕ್ಷೇಪಣೆಯನ್ನು ಸಲ್ಲಿಸಲಾಗಿತ್ತು. ಆಕ್ಷೇಪಣೆಗಳನ್ನು ಪರಿಶೀಲಿಸಿದ ಸರ್ಕಾರ ಯಾವುದೇ ಬದಲಾವಣೆ ಮಾಡದೆ ಯಥಾವತ್ ಫೈನಲ್ ಪಟ್ಟಿಯನ್ನು ಪ್ರಕಟಿಸಿದೆ. ಸರ್ಕಾರ ಬಿಬಿಎಂಪಿ ಮೀಸಲಾತಿ ಪಟ್ಟಿ ಫೈನಲ್ ಮಾಡಿರುವುದರಿಂದ ಚುನಾವಣೆಗೆ ಸನ್ನಿತವಾಗಿದೆ. ಇದರ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಎಂದು ಹೇಳಲಾಗಿದೆ.