ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಡಿಸಿ, ಬಿಬಿಎಂಪಿ ವಿಶೇಷ ಆಯುಕ್ತರು(ಕಂದಾಯ) ಅವರನ್ನು ಒಳಗೊಂಡ ಆಯೋಗವನ್ನು ಸರ್ಕಾರ ರಚಿಸಿದೆ. ಹಿಂದಿನ ಸರ್ಕಾರದ ವಾರ್ಡ್ ಪುನರ್ ವಿಂಗಡಣೆ ಬಗ್ಗೆ ಪ್ರಶ್ನಿಸಲಾಗಿತ್ತು. ಕಾಂಗ್ರೆಸ್ ಮಾಜಿ ಮೇಯರ್ ಮತ್ತು ಮುಖಂಡರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
ಹೊಸದಾಗಿ ವಾರ್ಡ್ ಪುನರ್ ವಿಂಗಡಣೆಗೆ ಕಾಲಾವಕಾಶ ನೀಡಲಾಗಿತ್ತು. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ 12 ವಾರ ಕಾಲಾವಕಾಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಗೆ ಸರ್ಕಾರ ಮುಂದಾಗಿದೆ.
ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ್ದು, ಸದಸ್ಯರಾಗಿ ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇಮಕ ಮಾಡಲಾಗಿದೆ.