
ಬೆಂಗಳೂರು: ಬಿಬಿಎಂಪಿ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. 10,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಎಇಇ ಶಿವಣ್ಣನನ್ನು ವಶಕ್ಕೆ ಪಡೆದಿದ್ದಾರೆ.
ಕಾಮಗಾರಿ ಬಿಲ್ ಬಿಡುಗಡೆಗೆ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಣ್ಣ, ಮುಂಗಡವಾಗಿ 10,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎಇಇಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.