ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದೇವನಹಳ್ಳಿಯ ಪಟ್ಟಣದ ಸಂತೆ ಬೀದಿಗೆ ಹೊಂದಿಕೊಂಡಿರುವ ಡಿಪೋ ಮ್ಯಾನೇಜರ್ ಕೊಠಡಿ ಮುಂದೆಯೇ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ನಾಗೇಶ್ (45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ನಾಗೇಶ್ ಆವತಿ ಗ್ರಾಮದವರಾಗಿದ್ದು, ಸೋಮವಾರ ಮಧ್ಯರಾತ್ರಿ ಡಿಪೋಗೆ ಆಗಮಿಸಿ ಡಿಪೊ ಮ್ಯಾನೇಜರ್ ಕೊಠಡಿಯ ಮುಂದೆಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.