ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ.
ಸೈಯದ್, ಸುಪ್ರೀತ್, ಅಚ್ಯುತ್ ಕುಮಾರ್, ಮನು, ನಾಗರಾಜ್ ಸೇರಿದಂತೆ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಸಚಿವ ನಾಗೇಶ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಕಾರ್ಯಕರ್ತರು ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಕೃತ್ಯವನ್ನು ಬಿಜೆಪಿ ನಾಯಕರು ಖಂಡಿಸಿದ್ದರು.