ಬೆಂಗಳೂರು: ಮಹಾರಾಷ್ಟ್ರದಲ್ಲಿ ಅನೇಕ ಸಚಿವರು, ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆದಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸಚಿವ ನಾಗೇಶ್ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತಮಗೆ ಸೋಂಕು ತಗುಲಿದ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.
ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ COVID-19 ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ನಾನು ಕ್ವಾರಂಟೈನ್ ನಲ್ಲಿದ್ದೇನೆ ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳು ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ತಮ್ಮನ್ನು ಪರೀಕ್ಷಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.