ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಕಲಿಸಲಾಗುವುದು. ಸರ್ಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಇಂಗ್ಲಿಷ್ ಕಲಿಸಲಾಗುತ್ತದೆ. ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ತಲಾ ಒಂದು ಮಾದರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಶಾಲೆಯ ಎಲ್ಲಾ ತರಗತಿಗಳಿಗೂ ಅಗತ್ಯ ಕೊಠಡಿಗಳ ವ್ಯವಸ್ಥೆ, ಎಲ್ಲಾ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬ ಒಬ್ಬ ಶಿಕ್ಷಕರು ಲಭ್ಯವಿರುವಂತೆ ವ್ಯವಸ್ಥೆಯನ್ನು ಮಾಡುತ್ತೇವೆ. ಇಂತಹ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲಿಷ್ ಕಲಿಕೆಯು ನಡೆಯಲಿದೆ. ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಕಲಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.