ತುಮಕೂರು: ಹಿಜಾಬ್, ಕೇಸರಿ ಶಾಲು ನಡುವೆ ಕುಂಕುಮ, ಬಳೆ ವಿವಾದ ಕೇಳಿ ಬಂದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಯಾವುದೇ ಶಾಲಾ-ಕಾಲೇಜುಗಳಲ್ಲಿ ಕುಂಕುಮ, ಬಳೆ ವಿವಾದವಾಗಿಲ್ಲ. ಸದ್ಯಕ್ಕೆ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ನಡೆಯುತ್ತಿದೆ. ಇದರಲ್ಲಿ ಕಾಣದ ಕೈ ಅಂತೇನಿಲ್ಲ. ಕಾಣುವ ಕೈ ಎಲ್ಲವನ್ನು ಮಾಡುತ್ತಿದೆ. ಇಂತಹ ವಿವಾದ ತೆಗೆದು ಸಮಾಜದ ಸಾಮರಸ್ಯವನ್ನು ಹಾಳು ಮಾಡಬೇಡಿ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದೇಶ ಉಲ್ಲಂಘಿಸಿದರೆ ಕೇಸ್ ಹಾಕುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದ್ದಾರೆ.