ಬೆಂಗಳೂರು: ಮಾರ್ಚ್ 28 ರ ಸೋಮವಾರದಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವಂತಿಲ್ಲ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಹಿಜಾಬ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶ ಜಾರಿಗೆ ಸರ್ಕಾರ ಮುಂದಾಗಿರುವುದರಿಂದ ಪರೀಕ್ಷೆಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವಂತಿಲ್ಲ.
ಸಚಿವ ನಾಗೇಶ್ ಅವರು, ಈ ವಿಷಯದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಕೊರೋನಾ ನಂತರ ಮೊದಲ ಸಲ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯಲು ರೆಡಿಯಾಗಿದ್ದು, ಅವರ ಮಾನಸಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿಯೂ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಹೇಳಿದ್ದಾರೆ.