alex Certify ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್

ರಾಯಚೂರು: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದರು.

ಅವರು ಮಂಗಳವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಅಳವಡಿಸಿರುವ ಮಳೆ ನೀರು ಕೊಯ್ಲು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಅದನ್ನು ನಿವಾರಿಸಲು ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. 371(ಜೆ) ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದರು.

ಕೋವಿಡ್ ಕಾರಣದಿಂದ ಕಳೆದ ವರ್ಷ ಸರಿಯಾಗಿ ಶಾಲೆಗಳು ನಡೆಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಹೀಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಿದ ನಂತರವೇ ಪಠ್ಯ ಬೋಧನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...