ತುಮಕೂರು: ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು, ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಿದ್ಧತೆ ಪರಿಶೀಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ಮೊದಲಿಗೆ ಹೇಳಲಾಗಿತ್ತು. ಆದರೆ, ತಜ್ಞರು ಮಕ್ಕಳ ಮೇಲೆ ಮೂರನೇ ಅಲೆ ಪರಿಣಾಮ ಕಡಿಮೆ ಎಂದು ತಿಳಿಸಿದ್ದಾರೆ. ಸೋಂಕು ಹರಡುವ ಸಾಧ್ಯತೆ ಕಡಿಮೆ. ಸೋಂಕು ತಗುಲಿದರೂ ಗಂಭೀರ ಪರಿಣಾಮವಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಂದರಿಂದ ಎಂಟನೇ ತರಗತಿ ಆರಂಭಿಸಲು ಚಿಂತನೆ ನಡೆದಿದೆ. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಶಾಲೆ-ಕಾಲೇಜು ಬಾಗಿಲು ತೆಗೆಯುವುದಿಲ್ಲ. ರಾಜ್ಯದ 5 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಹೇಳಿದ್ದಾರೆ.