ತುಮಕೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೆ ಅಲೆಯ ಆತಂಕ ಇಲ್ಲ. ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಎನ್ಇಪಿ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.