ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಪದವಿಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ, ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಿದ್ದು, ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿ ಜಾರಿಯಾಗುವುದರಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9, 10, 11, 12 ನೇ ತರಗತಿಗಳಿಗೆ ಕೂಡ ಪಾಠ ಮಾಡುವ ಜವಾಬ್ದಾರಿ ಹೊರಬೇಕಾಗುತ್ತದೆ. 9, 10 ನೇ ತರಗತಿಯಿಂದಲೇ ಪದವಿ ಪೂರ್ವ ಶಿಕ್ಷಣಕ್ಕೆ ಪೂರಕವಾಗುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.