alex Certify ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಂದ್​ ಆಗಿದ್ದ ಶಾಲೆ ಹಾಗೂ ಕಾಲೇಜುಗಳು ಇದೀಗ ಪುನಾರಂಭವಾಗಿದೆ. ಹೀಗಾಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್​ ಸಂಚಾರ ಮಾಡಿಸುವಂತೆ ಕೆಎಸ್​ಆರ್​ಟಿಸಿ ಅಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಸೂಚನೆ ನೀಡಿದ್ದಾರೆ.

9,10 ಹಾಗೂ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಹೀಗಾಗಿ ಈ ಹಿಂದೆ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಬಸ್​ಗಳು ಹೇಗೆ ಸಂಚಾರ ನಡೆಸುತ್ತಿದ್ದವೋ ಅದೇ ಸಮಯಕ್ಕೆ ಸರಿಯಾಗಿ ಈಗಲೂ ಕೂಡ ಬಸ್​ಗಳ ಓಡಾಟ ನಡೆಯಬೇಕು ಎಂದು ಸಚಿವ ಬಿ.ಸಿ. ನಾಗೇಶ್​ ಸೂಚನೆ ನೀಡಿದ್ದಾರೆ.

ಸಾರಿಗೆ ಸಂಚಾರ ಸುಗಮವಾದಲ್ಲಿ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಲಿದೆ. ಬಸ್​ನಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಮಾಸ್ಕ್​ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಸೂಚನೆ ನೀಡುವುದು ಬಸ್​ ನಿರ್ವಾಹಕರ ಜವಾಬ್ದಾರಿ ಎಂದು ಬಿ.ಸಿ. ನಾಗೇಶ್​ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...