ಬೆಳಗಾವಿ(ಸುವರ್ಣ ಸೌಧ): ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ವರ್ಷದ ನಂತರ ವರ್ಗಾವಣೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ -2021 ಅನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಪ್ರತಿವರ್ಷ ಶೇಕಡ 10 ರಷ್ಟು ಪ್ರಮಾಣ ಮೀರದಂತೆ ಪಿಯುಸಿ ಉಪನ್ಯಾಸಕರ ವರ್ಗಾವಣೆ ನಡೆಸಲಾಗುವುದು. ಶಿಕ್ಷಕರ ವರ್ಗಾವಣೆ ಮಾದರಿಯಲ್ಲಿ ಅರ್ಜಿ ಆಹ್ವಾನಿಸಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ತಿದ್ದುಪಡಿ ಮಸೂದೆ ಮಂಡಿಸಲಾಗಿದೆ.