ಬೆಂಗಳೂರು: ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿಗೆ ವರ್ಷಕ್ಕೆ 2 ಸಲ ಪರೀಕ್ಷೆ ನಡೆಸಲಾಗುವುದು. ಇಂಜಿನಿಯರಿಂಗ್ ಓದಿದವರನ್ನು ಕೂಡ ಶಿಕ್ಷಕರ ಹುದ್ದೆಗೆ ಪರಿಗಣಿಸುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಿದ್ದು, ನೇಮಕಾತಿಗೆ ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸಲಾಗುವುದು. ಅಗತ್ಯವಾದರೆ ಹೆಚ್ಚು ಸಲ ಪರೀಕ್ಷೆ ನಡೆಸಲಾಗುವುದು. ಇಂಜಿನಿಯರಿಂಗ್ ಸೇರಿದಂತೆ ಬೇರೆ ಬೇರೆ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದವರಿಗೆ ಡಿಎಡ್, ಬಿಎಡ್ ವ್ಯಾಸಂಗ ಮಾಡಿದ್ದಾರೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.